ವಿದ್ಯಾರ್ಥಿಗಳ ಆರೋಗ್ಯ ಪಾಲನೆಗೆ ಗಮನ ಹರಿಸಿ

19..Pyp.01
Published on

ಪಿರಿಯಾಪಟ್ಟಣ : ವಿದ್ಯಾರ್ಥಿ ನಿಲಯಗಳಲ್ಲಿರುವ ಮಕ್ಕಳ ಆರೋಗ್ಯ ಪಾಲನೆಗೆನಿಲಯ ಪಾಲಕರು ಹೆಚ್ಚು ಗಮನ ಹರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ತಿಳಿಸಿದರು.ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಪಾಲಕರಿಗೆ ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ಅರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಅಡುಗೆ ಮನೆ ಚೊಕ್ಕವಾಗಿ ಇರಬೇಕು ಎಂದರು.ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ ಮಾತನಾಡಿ, ಹಾಸ್ಟೆಲ್‌ಗಳಲ್ಲಿದ್ದು ವ್ಯಾಸಂಗ ಮಾಡುತ್ತಿರುವ ಮಕ್ಕಳ ಬೆಳವಣಿಗೆ ಮತ್ತು ಅವರ ಚಟುವಟಿಕೆ ಬಗ್ಗೆ ಮೇಲ್ವಿಚಾರಕರು ಮತ್ತು ಅಡುಗೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಬೇಕು. ಹೆಣ್ಣು ಮಕ್ಕಳ ಹಾಸ್ಟೆಲ್‌ಗಳಲ್ಲಿ ಋತುಮತಿ ಆದವರ ಬಗ್ಗೆ ಕಾಳಜಿ ವಹಿಸಬೇಕು ಎಂದರು. ದಂತ ವೈದ್ಯಧಿಕಾರಿ ಡಾ.ವಿದ್ಯಾ, ಡಾ.ಶಾಂತಕುಮಾರಿ, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net