ರಕ್ತದಾನದಿಂದ ಆರೋಗ್ಯ ವೃದ್ಧಿ

blood camp
ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಸಂಸ್ಥೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದವರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಧರಣೇಂದ್ರ ದಿನಕರ್, ಜಿ.ಸಿ.ರಾಕೇಶ್, ಬಿ.ಪಿ.ರವಿಕುಮಾರ್, ಚಂದ್ರಕಾಂತ್, ಚೇತನ್ ಇತರರಿದ್ದರು.
Published on

ತರೀಕೆರೆ: ರಕ್ತದಾನ ಎಲ್ಲ ದಾನಗಳನ್ನು ಮೀರಿಸುವಂಥದ್ದು ಎಂದು 115ನೇ ಬಾರಿ ರಕ್ತದಾನ ಮಾಡಿದ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯ ಹಿರಿಯ ಸಹಾಯಕ ಧರಣೇಂದ್ರ ದಿನಕರ್ ಹೇಳಿದರು. ತಾಲೂಕಿನ ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಸಂಸ್ಥೆ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುವುದಲ್ಲದೆ, ರಕ್ತದ ಒತ್ತಡ ಸಮತೋಲನದಲ್ಲಿರುತ್ತದೆ. ಹೀಗಾಗಿ ತುರ್ತು ಸಂದರ್ಭಗಳಲ್ಲಿ ನೆರವಾಗುವುದು ಮಾತ್ರವಲ್ಲ, ಆರೋಗ್ಯದ ದೃಷ್ಟಿಯಿಂದಲೂ ರಕ್ತದಾನ ಮಾಡುವುದು ಉತ್ತಮ ಎಂದರು. ರೋಟರಿ ಸಂಸ್ಥೆ ಅಧ್ಯಕ್ಷ ಜಿ.ಸಿ.ರಾಕೇಶ್ ಮಾತನಾಡಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಸಂಸ್ಥೆಯಿಂದ ವರ್ಷಕ್ಕೆ ಎರಡರಿಂದ ಮೂರು ಬಾರಿ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಶಿಬಿರದಲ್ಲಿ 31 ಯೂನಿಟ್ ರಕ್ತ ಸಂಗ್ರಹಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದವರಿಗೆ ರೋಟರಿ ಸಂಸ್ಥೆ ಪ್ರಶಂಸನಾ ಪತ್ರ ನೀಡಿತು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಜಯಣ್ಣ, ರೋಟರಿ ಸಂಸ್ಥೆ ಕಾರ್ಯದರ್ಶಿ ಬಿ.ಪಿ.ರವಿಕುಮಾರ್, ಸದಸ್ಯರಾದ ಚಂದ್ರಕಾಂತ್, ಚೇತನ್, ಗ್ರಾಮಸ್ಥ ಸೋಮಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net