ಆರೋಗ್ಯ ಇದ್ದವರೇ ಶ್ರೀಮಂತರು

cancer
ಮೂಡಿಗೆರೆಯಲ್ಲಿ ಏರ್ಪಡಿಸಿದ್ದ ಕ್ಯಾನ್ಸರ್ ಜಾಗೃತಿ, ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪ್ರಿಯಾಂಕಾ ಮಾತನಾಡಿದರು. ಕೆ.ವೆಂಕಟೇಶ್, ಸುಪ್ರೀತ್, ರಂಗಸ್ವಾಮಿ ಇತರರಿದ್ದರು.
Published on

ಮೂಡಿಗೆರೆ: ಹಣವಿದ್ದ ಮಾತ್ರಕ್ಕೆ ಶ್ರೀಮಂತರೆನಿಸಿಕೊಳ್ಳುವುದಿಲ್ಲ. ಯಾರು ಆರೋಗ್ಯದಿಂದ ಇರುತ್ತಾರೋ ಅವರೇ ನಿಜವಾದ ಶ್ರೀಮಂತರು ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪ್ರಿಯಾಂಕಾ ಹೇಳಿದರು.

ಪಪಂ ಸಭಾಂಗಣದಲ್ಲಿ ಸೋಮವಾರ ಜೇಸಿ ಸಂಸ್ಥೆ ಮತ್ತು ಆರೋಗ್ಯ ಇಲಾಖೆಯಿಂದ ಏರ್ಪಡಿಸಿದ್ದ ಕ್ಯಾನ್ಸರ್ ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಸರಿಯಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. 35 ವರ್ಷ ಮೇಲ್ಪಟ್ಟವರು ಕನಿಷ್ಠ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಪಪಂ ಸದಸ್ಯ ಕೆ.ವೆಂಕಟೇಶ್ ಮಾತನಾಡಿ, ಪೌರ ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಸ್ಥರು ಪ್ರತಿದಿನ ತಮ್ಮ ಕಾಯಕದಲ್ಲಿ ನಿರತರಾಗಿರುವುದರಿಂದ ಆರೋಗ್ಯದ ಬಗ್ಗೆಯೂ ಹೆಚ್ಚು ನಿಗಾ ವಹಿಸಬೇಕು. ತುಂಬ ಮಾರಕವಾಗಿರುವ ಕ್ಯಾನ್ಸರ್ ರೋಗ ಕುರಿತು ಆರೋಗ್ಯ ಇಲಾಖೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ ಎಂದರು.
ಜೇಸಿ ಅಧ್ಯಕ್ಷ ಸುಪ್ರೀತ್, ಕಾರ್ಯದರ್ಶಿ ದೀಕ್ಷಿತ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಂದರೇಶ್, ಪಪಂ ಮುಖ್ಯಾಧಿಕಾರಿ ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net