

ಕೋಲಾರ: ವೈದ್ಯರು ನೀಡಿದ ಸಲಹೆ, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದಾಗ ಮಾತ್ರ ಮಧುಮೇಹ, ರಕ್ತದೊತ್ತಡ (ಬಿಪಿ) ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಬಾಂಕ್ವೆಟ್ ಹಾಲ್‌ನಲ್ಲಿ ಆರೋಗ್ಯ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ಕೋಲಾರ ಜಿಲ್ಲೆಯಿಂದ ಗೃಹ ಆರೋಗ್ಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಡಿಯೋ ಕಾನರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಸೇವೆ ಕಲ್ಪಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.
ರಾಜ್ಯದ 7 ಕೋಟಿ ಜನರಿಗೂ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಮುಂದಾಗಿದೆ. ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ. ಇದೀಗ ಕೋಲಾರದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ್ದು, ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.
ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದರು.
* ಪ್ರತಿಯೊಬ್ಬರಿಗೂ ಇದೆ ಆರೋಗ್ಯದ ಹಕ್ಕು
ಬಹಳ ಜನರು ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಎಂದು ಸಿದ್ದರಾಮಯ್ಯ ತಿಳಿಸಿದರು. ನಾನು ೩೦ ವಷÀðಗಳಿಂದ ಸಕ್ಕರೆ ಕಾಯಿಲೆಯನ್ನು ಎದುರಿಸುತ್ತಿದ್ದೇನೆ, ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು, ಧೂಮಪಾನ ಮಾಡುತ್ತಿದ್ದಾಗ ಹೃದಯ ಸಂಬಂಧ ಕಾಯಿಲೆ ಕಾಣಿಸಿಕೊಂಡಿತ್ತು, ಆಗ ಸ್ಟಂಟ್ ಹಾಕಿಸಿಕೊಂಡು ಇಂದಿಗೆ ೨೪ ವಷÀð ಆಗಿದೆ. ವೈದ್ಯರ ಶಿಫಾರಸನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವುದರಿಂದ ಆರೋಗ್ಯವಂತನಾಗಿದ್ದೇನೆ ಎಂದು ಉದಾಹರಿಸಿಕೊಂಡರು.
* ಸಮತೋಲನ ಆಹಾರ ಪದ್ಧತಿ ಮುಖ್ಯ
ಶುಗರ್, ಬಿಪಿ ಇದ್ದರೂ ಪಕ್ಷದ ಕೆಲಸವನ್ನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸಾನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಆರಾಮಾಗಿ ಎಲ್ಲ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ, ಎಲ್ಲರೂ ವೈದ್ಯರ ಶಿಫಾರಸ್ಸುಗಳನ್ನು ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.
ಕ್ಯಾನ್ಸರ್ ರೋಗ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದು ತಿಳಿಸಿದರು.
ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ?, ಜೀವನದಲ್ಲಿ ಸಮತೋಲನ ಆಹಾರ ಪದ್ಧತಿ ಮುಖ್ಯ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
* ಅನಾರೋಗ್ಯ ತಡೆಗೆ ಯೋಜನೆ ಸಹಕಾರಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿದೆ. ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯದ್ಯಂತ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಅಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರುವುದು ಗೃಹ ಆರೋಗ್ಯ ಯೋಜನೆಯ ಗುರಿಯಾಗಿದೆ. ದೇಶದಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ವಿಶೇಷಷವಾಗಿ ಕರ್ನಾಟಕದಲ್ಲಿ ಶೇ.26.9 ರಕ್ತದೊತ್ತಡ, ಶೇ.15.6 ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ ಉಂಟಾಗುತ್ತಿರುವ ಮರಣ ಹಾಗೂ ಅನಾರೋಗ್ಯವನ್ನು ತಡೆಗಟ್ಟಲು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
* ಜನ ಜಾಗೃತಿ ಮೂಡಿಸಿ
ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ. ರೋಗಕ್ಕೆ ತುತ್ತಾದವರಿಗೆ ಸೂಕ್ತ ಔಷಧಗಳನ್ನು ತಲುಪಿಸಲಾಗುತ್ತದೆ. ಆರಂಭಿಕ ಹಂತದಲ್ಲಿ ರಕ್ತದೊತ್ತಡ, ಮಧುಮೇಹವನ್ನು ಜನರು ನಿರ್ಲಕ್ಷಿಸುತ್ತಾರೆ. ಆದರೆ ದೀರ್ಘಾವಽಯಲ್ಲಿ ಈ ರೋಗಗಳೇ ಕಿಡ್ನಿ ವೈಫಲ್ಯ, ಹೃದಯಾಘಾತಗಳಿಗೆ ಕಾರಣವಾಗುತ್ತದೆ ಎಂದು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
* ಫಲಾನುಭವಿಗಳಿಗೆ ಔಷಧ ವಿತರಣೆ
ಕಾರ್ಯಕ್ರಮದಲ್ಲಿ ಫಲಾನುಭವಿಗಳಾದ ಗದ್ದೆಕಣ್ಣೂರು ಗೋವಿಂದಪ್ಪ, ಮೇಹಬೂಬ್‌ಪಾಷಾ, ಹಾರೋಹಳ್ಳಿ ಲಕ್ಷ್ಮಮ್ಮ, ಮುರಳಿ ಅವರಿಗೆ ಉಚಿತ ಔಷಧ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಷÀðಗುಪ್ತ, ವರ್ಚವಲ್ ವೇದಿಕೆಯಲ್ಲಿ ಜಿಲ್ಲಾಽಕಾರಿ ಅಕ್ರಂಪಾಷಾ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಬಿ.ನಿಖಿಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಽಕಾರಿ ಡಾ.ಶ್ರೀನಿವಾಸ್, ಜಿಲ್ಲಾಶಸ್ತç ಚಿಕಿತ್ಸಕಿ ಡಾ.ಮಮತಾ, ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರನ್, ಆರ್‌ಸಿಒ ಡಾ.ಚಾರಣಿ ಹಾಜರಿದ್ದರು.