ಹೃದಯಾಘಾತ ಪ್ರಕರಣ; ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕಿರಣ್ ಮಜುಂದಾರ್| Kiran-Mazumdar-Shaw

kiran majundar saw
Published on

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಮಜುಂದಾರ್ ಶಾ, ಈ ಲಸಿಕೆಗಳನ್ನು ಆತುರದಿಂದ ಅನುಮೋದಿಸಲಾಗಿದೆ ಎಂದು ಹೇಳುವುದು ವಾಸ್ತವಿಕವಾಗಿ ತಪ್ಪು ಮತ್ತು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸಿದಂತಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ -19 ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆಯೇ ಎಂದು ಸಂದೇಹ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ವಿಷಯ ಇದೀಗ ಚರ್ಚೆಯನ್ನು ಹುಟ್ಟುಹಾಕಿದೆ.

ಇಂದು (03) ಮುಖ್ಯಮಂತ್ರಿಗಳ ಅಭಿಪ್ರಾಯಕ್ಕೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಆಕ್ಷೇಪ ಹೊರಹಾಕಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚಾಗಿ ಕಾಡುತ್ತಿದ್ದ ಸಂದರ್ಭದಲ್ಲಿ ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆಗಳನ್ನು ತುರ್ತು ಬಳಕೆ ಅಧಿಕಾರ ಚೌಕಟ್ಟಿನಡಿಯಲ್ಲಿ ಅನುಮೋದಿಸಲಾಗಿದೆ. ಸುರಕ್ಷತೆ ಮತ್ತು ಪರಿಣಾಮಕಾರಿತ್ವಕ್ಕಾಗಿ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಲಸಿಕೆಗಳನ್ನು ಅನುಮೋದಿಸಲಾಗಿದೆ ಎಂದು ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

(ಏಜೆನ್ಸೀಸ್)

ಕೋವಿಡ್ ಲಸಿಕೆ ಲಕ್ಷಾಂತರ ಜೀವಗಳನ್ನು ಉಳಿಸಿದೆ. ಎಲ್ಲಾ ಲಸಿಕೆಗಳಂತೆ ಇದರಲ್ಲಿಯೂ ಸಣ್ಣಪುಟ್ಟ ಅಡ್ಡಪರಿಣಾಮಗಳು ಇರಬಹುದು. ಲಸಿಕೆಯ ಬಗ್ಗೆ ಆರೋಪ ಮಾಡುವ ಬದಲು ಅವುಗಳ ಅಭಿವೃದ್ಧಿಯ ಹಿಂದಿನ ವಿಜ್ಞಾನವನ್ನು ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net