ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ Heart Attack ಆಗಿ ಯುವಕ ನಿಧನ; Video Viral

Rewa Heart Attack
Published on

ರೇವಾ: ಕೋವಿಡ್​ ಎರಡನೇ ಅಲೆ ನಂತರ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು (Heart Related Issues) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಯುವಜನರೇ ಹೆಚ್ಚಾಗಿ ಇದಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಯುವಕನೋರ್ವ ತನ್ನ ಸ್ನೇಹಿತರೊಡನೆ ಮಾತನಾಡುತ್ತ ಕುಳಿತಿದ್ದಾಗ ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್​ ಆಗಿದೆ.

ಮೃತರನ್ನು ಪ್ರಕಾಶ್​ ಸಿಂಗ್​ ಬಘೇಲ್​ (31) ಎಂದು ಗುರುತಿಸಲಾಗಿದ್ದು, ಇವರು ಮಧ್ಯಪ್ರದೇಶದ ರೇವಾ ಜಿಲ್ಲೆಯ  ಸಿರ್ಮೌರ್ ಚೌರಾಹಾದಲ್ಲಿ ನಡೆದಿದೆ. ಅಕ್ಟೋಬರ್​ 20ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವೈರಲ್​ ಆಗಿರುವ ವಿಡಿಯೋ (Viral Video) ನೋಡುವುದಾದರೆ, ಪ್ರಕಾಶ್ ಸಿಂಗ್​ ತನ್ನ ಸಹೋದರ ವಿನಯ್​ ಅಂಗಡಿಯಲ್ಲಿ ಕುಳಿತುಕೊಂಡು ಆತನ ಸ್ನೇಹಿತರೊಂದಿಗೆ ನಗುತ್ತಾ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಮಾತನಾಡುತ್ತಿರುವಾಗಲೇ ತಲೆಯನ್ನು ಕೆಳಗೆ ಹಾಕುವ ಪ್ರಕಾಶ್​ ಏಕಾಏಕಿ ನೆಲಕ್ಕುರುಳುತ್ತಾನೆ. ಕೂಡಲೇ ಅಲ್ಲಿದ್ದವರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಕ್ಟೋಬರ್​ 20ರಂದು ಪ್ರಕಾಶ್​ ಸಿಂಗ್​ ತನ್ನ ಸಹೋದರನ ಅಂಗಡಿಯಲ್ಲಿ ಆತನ ಸ್ನೇಹಿತರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದ. ಈ ವೇಳೆ ಆತನಿಗೆ ಹೃದಯಾಘಾತವಾಗಿದ್ದು (Heart Attack), ತಕ್ಷಣವೇ ಕುಸಿದು ಬಿದ್ದಿದ್ದಾನೆ. ಕೂಡಲೇ ಅಲ್ಲಿದ್ದವರು ಆತನನ್ನು ಆಸ್ಪತ್ರೆಗೆ ದಾಖಲಿಸಲಾದರೂ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net