ವಾರ ಇಡೀ ಗುಡುಗು, ಸಿಡಿಲು ಸಹಿತ ಜಲಪ್ರವಾಹದ ಮುನ್ನೆಚ್ಚರಿಕೆ..!

rainnn
Published on

Weather Alert 27-08-2023: : ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಆದರೂ ಜನರಿಗೆ ಬಿಸಿತಾಪ ನಿರಾಸೆಯನ್ನುಂಟು ಮಾಡಿದೆ.

ಇನ್ನೊಂದೆಡೆ ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದಾದ್ಯಂತ ಇಡೀ ವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net