

ಬೆಂಗಳೂರು: ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕನ ವಿಜಯಪುರ ಪಟ್ಟಣದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ರೋಡ್‌ಶೋ ರದ್ದು ಮಾಡಲಾಗಿದೆ.
ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಷಾ ಆಗಮಿಸಿದ್ದಾರೆ.
ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ಮಳೆಯ ಕಾರಣ ಕಾರ್ಯಕರ್ತರು ಆಗಮನ ವಿಳಂಬ ರೋಡ್‌ಶೋ ಮುಂದೂಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ತನ್ನ ಎಲ್ಲಾ 224 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರ ಬದಲಿಗೆ ಬೆಂಗಳೂರಿನತ್ತ ಅಮಿತ್ ಷಾ ತೆರಳಿದ್ದಾರೆ. ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.