ಭಾರಿ ಮಳೆ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

rain
ಸಾಂದರ್ಭಿಕ ಚಿತ್ರ
Published on

ಮಂಗಳೂರು: ರಾಜ್ಯದಲ್ಲಿ ಜುಲೈ10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಭಾರೀ ಮಳೆಯ ಸಾಧ್ಯತೆ ಇರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net