ಮಳೆ, ಚಳಿ...ಮುಂದಿನ ಐದು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ.. Bangalore Weather

rain final
Published on

ಬೆಂಗಳೂರು: (Bangalore Weather ) ಬೆಳ್ಳಂಬೆಳಗ್ಗೆ ಬೆಂಗಳೂರಿನಾದ್ಯಂತ ಚುಮುಚುಮು ಮಳೆ ಎಡಬಿಡದೆ ಸುರಿಯುತ್ತಿದೆ.  ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆಯಿಂದ ದಟ್ಟ ಮೋಡ ಕವಿದ ವಾತಾವರಣವಿದೆ. ಇನ್ನು ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಯಶವಂತಪುರ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರಗಳಲ್ಲಿ ಕೂಡ ಇನ್ನೊಂದು ವಾರದವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕ, ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿದೆ. ಪರಿಣಾಮ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆಗುತ್ತಿದೆ.

ತಮಿಳುನಾಡು ಮತ್ತು ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಭಾಗಗಳಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಿದೆ.  ಕರ್ನಾಟಕದ ಮಲೆನಾಡು ಭಾಗದಲ್ಲೂ ಮಳೆಯ ವಾತಾವರಣ ಇರಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡು, ಕೇರಳದಲ್ಲಿ ಐದು ದಿನಗಳ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲೂ ಅದೇ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net