ಮಂಗಳೂರು: ಕಡಲ ತೀರದಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯಾಗುತ್ತಿರುವುದರಿಂದ ಮತ್ತು ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿಯುದ್ದಕ್ಕೂ ಅಲೆಗಳ ಆರ್ಭಟ ಹೆಚ್ಚಾಗಲಿದ್ದು, ತೀರ ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 8ರಿಂದ ಆರಂಭವಾಗಲಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.