ಮೈಚಾಂಗ್ ಚಂಡಮಾರುತ; ಮನೆಯಿಂದಲೇ ಕೆಲಸ ಮಾಡಲು ನೌಕರರಿಗೆ ಸೂಚನೆ

Office work
Published on

ನವದೆಹಲಿ: ಚೆನ್ನೈನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ಅದರ ತೀವ್ರತೆಯು ಡಿಸೆಂಬರ್ 5 ರವರೆಗೆ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜನರ ಸುರಕ್ಷತೆಗಾಗಿ ಕೆಲವು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಾಗಿದೆ.

ಭಾರೀ ಮಳೆಯಿಂದಾಗಿ ಚೆನ್ನೈನ ಹಲವು ಮೆಟ್ರೋ ನಿಲ್ದಾಣಗಳು ಜಲಾವೃತಗೊಂಡಿವೆ. ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ಅಡಿ ಆಳದವರೆಗೆ ನೀರು ಸಂಗ್ರಹವಾಗಿದ್ದು, ವಿಮಾನ ನಿಲ್ದಾಣದ ಪ್ರವೇಶವನ್ನು ಮುಚ್ಚಲಾಗಿದೆ. ಆಲಂದೂರಿನಲ್ಲಿ ಮೆಟ್ರೋ ಹತ್ತಲು ಪ್ರಯಾಣಿಕರಿಗೆ ಸೂಚಿಸಲಾಯಿತು.  ತಮಿಳುನಾಡಿನ ಚೆಂಗಲ್‌ಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರು ಸೇರಿದಂತೆ ಇತರ ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ), ಗಂಟೆಗೆ 35 ರಿಂದ 80 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಜನರನ್ನು ಮನೆಯೊಳಗೆ ಇರುವಂತೆ ಕೇಳಿದೆ ಮತ್ತು ಹಲವಾರು ರಸ್ತೆಗಳು ಜಲಾವೃತಗೊಂಡಿರುವುದರಿಂದ ಅನಗತ್ಯವಾಗಿ ಹೊರಗೆ ಹೋಗಬೇಡಿ. ಹಲವು ರಸ್ತೆಗಳು ಜಲಾವೃತವಾಗಿವೆ. ಮನೆಯಲ್ಲೇ ಇರಿ ಮತ್ತು ಸುರಕ್ಷಿತವಾಗಿರಿ. ತುರ್ತು ಪರಿಸ್ಥಿತಿಗಾಗಿ ದಯವಿಟ್ಟು 1913 ನಂಬರ್​ಗೆ ನಮ್ಮನ್ನು ಸಂಪರ್ಕಿಸಿ, ”ಎಂದು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತವು ಬೀಸುತ್ತಿರುವ ಕಾರಣ, ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆ, ಪಾಂಡಿಚೇರಿ, ಕಾರೈಕಲ್ ಮತ್ತು ಯಾನಂನಲ್ಲಿ ಡಿಸೆಂಬರ್ 4 ರಿಂದ ಸೋಮವಾರದಿಂದ ಎರಡು ದಿನಗಳ ಕಾಲ  ಅಧಿಕಾರಿಗಳು ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಸೋಮವಾರ ಸಾರ್ವಜನಿಕ ರಜಾದಿನವನ್ನು ಘೋಷಿಸಿದೆ.  ಮುಂಬರುವ ಚಂಡಮಾರುತವನ್ನು ಗಣನೆಗೆ ತೆಗೆದುಕೊಂಡು ಅನಿವಾರ್ಯ ಸಂದರ್ಭಗಳಲ್ಲಿ  ಚೆನ್ನೈ, ತಿರುವಳ್ಳೂರ್‌, ಕಾಂಚಿಪುರಂ ಹಾಗೂ ಚೆಂಗಲ್‌ಪಟ್ಟು ನಗರಗಳಲ್ಲಿ ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ (ವರ್ಕ್‌ ಫ್ರಂ ಹೋಮ್)‌ ಮಾಡುವಂತೆ ಸೂಚಿಸಿವೆ.

ಚಂಡಮಾರುತವು ಮತ್ತಷ್ಟು ತೀವ್ರಗೊಂಡು ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯನ್ನು ಸೋಮವಾರ ಮುಂಜಾನೆ ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net