2 ದಿನ ಕರಾವಳಿ, ಮಲೆನಾಡಲ್ಲಿ ಜೋರು ಮಳೆ - Heavy rain

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.6ರಂದು ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ, ಆರೆಂಜ್ ಅಲರ್ಟ್ ಕೊಟ್ಟಿದೆ.
ಕರಾವಳಿ, ಮಲೆನಾಡಲ್ಲಿ ಬಿರುಸು
ಮುಂದಿನ 2 ದಿನ ಇನ್ನಷ್ಟು ಜೋರು ಮಳೆ
Published on: 

ಬೆಂಗಳೂರು: (Heavy rain in coastal and Malnad) ಬರ ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧಿಕಾರಿಗಳು ರಾಜ್ಯಕ್ಕೆ ಆಗಮಿಸಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣ ಹಾಸನ ಸೇರಿ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸೋಮವಾರ ಗುಡುಗು ಸಹಿತ ರಭಸವಾಗಿ ಮಳೆಯಾಗಿತ್ತು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.6ರಂದು ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ, ಆರೆಂಜ್ ಅಲರ್ಟ್ ಕೊಟ್ಟಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಮುಂದಿನ 2 ದಿನ ಮತ್ತು ಕೊಡಗಿನಲ್ಲಿಯೂ ಅ.6ರಂದು ಜೋರು ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಅ.7ರಿಂದ ಅ.11ರವರೆಗೆ ಸಾಧಾರಣ ಮಳೆ ಸುರಿಯಲಿದೆ.

Also Read
ಬೆಂಗ್ಳೂರಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆ- Rain in Bangalore
ಕರಾವಳಿ, ಮಲೆನಾಡಲ್ಲಿ ಬಿರುಸು

ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಇತರೆ ಜಿಲ್ಲೆಗಳಕ್ಕಿಂತ ಕಲಬುರಗಿಯಲ್ಲಿ 36.6 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ವಾಡಿಕೆಕ್ಕಿಂತ 4 ಡಿ.ಸೆ. ಅಧಿಕವಾಗಿದೆ. ಬಾಗಲಕೋಟೆ ಧಾರವಾಡ ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿಯಲ್ಲೂ ವಾಡಿಕೆಕ್ಕಿಂತ 4-5 ಡಿ.ಸೆ.ಹೆಚ್ಚು ದಾಖಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net