ಇಂದಿನಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ|Rain Alert

Rain Alert
Published on

Rain Alert: ಇಂದಿನಿಂದ (ಏ.30) ಮೇ 2ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮುಖ್ಯವಾಗಿ ಕೊಪ್ಪಳ, ಧಾರವಾಡ, ಹಾವೇರಿ, ಗದಗ ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಯೆಲ್ಲೋ ಅಲೆರ್ಟ್

ರಾಜ್ಯದ 16 ಜಿಲ್ಲೆಗಳಿಗೆ ಯೆಲ್ಲೋ ಅಲೆರ್ಟ್ ಘೋಷಿಸಲಾಗಿದೆ. ಅವುಗಳೆಂದರೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈಗಾಗಲೇ ಅನೇಕ ಕಡೆಗಳಲ್ಲಿ ಮಳೆ ಆರಂಭಗೊಂಡಿದೆ. ಗುಡುಗು, ಗಾಳಿ ಸಹಿತ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net