ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ಹವಾಮಾನ ಮುನ್ಸೂಚನೆ

Rain 29
Published on

ಬೆಂಗಳೂರು: ಬಂಗಾಳಕೊಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕೆಲ ಭಾಗಗಳಲ್ಲಿ ಭಾನುವಾರ ಮಳೆಯಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.16ರಿಂದ ನಾಲ್ಕು ದಿನ ಗುಡುಗು ಮಿಂಚು ಸಹಿತ ಹಿಂಗಾರು ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ರಾಜ್ಯದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲ ಭಾಗಗಳಲ್ಲಿ ಅಲ್ಲೆಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net