ಇಂದಿನಿಂದ ಮೂರ ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಣೆ

rk
Published on

Weather report 30-09-2023: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು ಎರಡೂ ಜಿಲ್ಲೆಯಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್​, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆ ಹಾಗೂ ನಾಡಿದ್ದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈ ಎಲ್ಲಾ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಕೋಲಾರ, ಕೊಪ್ಪಳ, ಶಿವಮೊಗ್ಗ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


ಅಕ್ಟೋಬರ್ ವೇಳೆಗೆ ಮಳೆ ದೇಶಾದ್ಯಂತ ಸಾಮಾನ್ಯವಾಗಿ ಕಡಿಮೆಯಾಗುತ್ತದೆ. ಆದರೆ ದೇಶದಲ್ಲಿ ಮುಂದಿನ ತಿಂಗಳು ಒಂದಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪ್ರದೇಶ ಕಂಡು ಬಂದಿರುವುದು ಉತ್ತಮ ಮಳೆಗೆ ಕಾರಣವಾಗಿದೆ.


ಆಗಸ್ಟ್ ನಲ್ಲಿ ಮಳೆ ಶೇಕಡ 36ರಷ್ಟು ಕಡಿಮೆಯಾಗಿದ್ದರೆ, ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಶೇಕಡ 13ರಷ್ಟು ಅಧಿಕ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net