ರಾಜ್ಯದಲ್ಲಿ ಬಿರುಸಾದ ಮಳೆ; ಕೆಲವಡೆ ಶೀತಗಾಳಿ

heavy rain
Published on

ಬೆಂಗಳೂರು: ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಕೊಡಗು, ಯಾದಗಿರಿ, ಉಡುಪಿ ಹಾಗೂದಕ್ಷಿಣ ಕನ್ನಡ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬುಧವಾರವೂ ವರುಣಾರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ.ಕೆಲವೆಡೆ ಶೀತಗಾಳಿ ಬೀಸುತ್ತಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ೋಷಿಸಿದೆ. ಅಲ್ಲದೆ, ಜು.21ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜು.20ರಿಂದ ಜು.23ರವರೆಗೆ, ಬೆಳಗಾವಿ, ಕಲಬುರಗಿ, ಬೀದರ್‌ನಲ್ಲಿ ಜು.23ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ, ಹಾವೇರಿಯಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net