ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ; ನಾಳೆ-ನಾಡಿದ್ದು ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

Heavy Rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿಯಲ್ಲಿ ಅ. 9, 10ರಂದು ಹಾಗೂ ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಅ.10ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸಾಧಾರಣ ಮಳೆ ಬೀಳಲಿದೆ.

ಜೂ 1ರಿಂದ ಸೆ.30ರವರೆಗೆ ರಾಜ್ಯಾದ್ಯಂತ 852 ಮಿ.ಮೀ. ಮಳೆ ಬದಲಾಗಿ 1,019 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.20 ಹೆಚ್ಚು ಸುರಿದಿದೆ. ಕಳೆದ ಒಂದು ವಾರದಲ್ಲಿ ಉತ್ತರ ಒಳನಾಡಿನಲ್ಲಿ ಉತ್ತಮ ವರ್ಷಧಾರೆಯಾದರೆ, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net