ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Bengaluru Rain
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಬೀದರ್, ಕಲಬುರುಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೇ 3 ರವರೆಗೆ ಭಾರಿ ಮಳೆಯಾಗಲಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆಯಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net