ದೇಶಾದ್ಯಂತ ಭಾರೀ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ | Meteorological Department

dk - 2025-05-20T204310.208
Published on: 

Meteorological Department: ನೈರುತ್ಯ ಮನ್ಸೂನ್​(ಮುಂಗಾರು) ಇನ್ನೇರೆಡು ದಿನಗಳಲ್ಲಿ ಕೇರಳಕ್ಕೆ ಅಪ್ಪಳಿಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೇಲ್ಮೈ ಪ್ರಸರಣದ ಪ್ರಭಾವದಿಂದಾಗಿ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕ, ಕೇರಳ, ದಕ್ಷಿಣ ಒಡಿಶಾ ಮತ್ತು ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಆಂಧ್ರಪ್ರದೇಶ, ಅಸ್ಸಾಂ, ಮೇಘಾಲಯ, ಕೊಂಕಣ, ಗೋವಾ, ಪಶ್ಚಿಮ ಬಂಗಾಳ, ಸಿಕ್ಕಿಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರುಣಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯ ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದ್ದು, ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ(ಏಜೆನ್ಸೀಸ್​)