ಜೋರಾಯ್ತು ಮುಂಗಾರು: ಜೂನ್​ 14ರಿಂದ ಮತ್ತಷ್ಟು ಹೆಚ್ಚಲಿದೆ ಮಳೆ, ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ

rain
Published on

ಬೆಂಗಳೂರು: ಇಂದಿನಿಂದ ಮುಂಗಾರು ಮಾರುತಗಳು ಚುರುಕು ಪಡೆದುಕೊಂಡಿವೆ. ಇದರ ಪರಿಣಾಮ ರಾಜ್ಯದಲ್ಲಿ ಜೂ.14ರಿಂದ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.14ರಿಂದ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಜೂ.14ರಿಂದ ಯೆಲ್ಲೋ ಅಲರ್ಟ್ ಇರಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.14ರಿಂದ ಎರಡು ದಿನ ಯೆಲ್ಲೋ ಅಲರ್ಟ್ ಇದ್ದರೆ, ಜೂ.16ರಿಂದ ಮುಂದಿನ 48 ಗಂಟೆ ಭಾರಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net