

Heavy Rains: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿದ್ದು, ನಗರದ್ಯಂತ ಮಳೆ ನೀರು ನಿಂತ ಹಿನ್ನಲೆ ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೆ, ಮಳೆ ಗಾಳಿ ಕಾರಣದಿಂದ ಕನಿಷ್ಠ 12 ವಿಮಾನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ.
ದೆಹಲಿಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ, ಮಧ್ಯಾಹ್ನ 3 ರಿಂದ 4 ರ ನಡುವೆ 12 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಉಲ್ಲೇಖಿಸಿದೆ.
ಸಚಿವಾಲಯ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರೀ ನೀರು ನಿಂತಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಾದ ಪಾಲಂ ಮತ್ತು ಮಹಿಪಾಲ್ಪುರದಲ್ಲಿಯೂ ಸಹ ವಾಹನಗಳು ನೀರಿನಿಂದ ತುಂಬಿ ತುಳುಕುತ್ತಿದ್ದ ಕಾರಣ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಈ ಹಿಂದೆ ಈ ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿತ್ತು.(ಏಜೆನ್ಸಿಸ್)