ಪಶ್ಚಿಮ ಬಂಗಾಳದ ಡಾರ್ಜಿಲಿಂಗ್​ನಲ್ಲಿ ಭಾರಿ ಮಳೆ, ಭೂಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ| landslides

Untitled design - 2025-10-05T221846.108
Published on

landslides: ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಭಾನುವಾರ ನಿರಂತರ ಮಳೆಯಿಂದಾಗಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವು ಮನೆಗಳು ಕೊಚ್ಚಿ ಹೋಗಿದ್ದು, ಹಳ್ಳಿಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದಲ್ಲಿ ಮಕ್ಕಳು ಸೇರಿದಂತೆ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಗಾಯಗೊಂಡಿದ್ದಾರೆ.

NDRF  ಪ್ರಕಾರ, ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶವಾದ ಮಿರಿಕ್‌ನಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ. ಡಾರ್ಜಿಲಿಂಗ್‌ನಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವು ಗಾಯಗೊಂಡಿದ್ದಾರೆ. ಪೊಲೀಸರು, ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಉತ್ತರ ಬಂಗಾಳ ಅಭಿವೃದ್ದಿ ಸಚಿವ ಉದಯನ್ ಗುಹಾ, ಪರಿಸ್ಥಿತಿ ಆತಂಕಕಾರಿಯಾಗಿದೆ. ಈಗ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇನ್ನು ಹೆಚ್ಚಾಗುವ ಸಾಧ್ಯತೆಯಿದೆ, ನಾನು ಆ ಪ್ರದೇಶಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾಳೆ ಡಾರ್ಜಿಲಿಂಗ್​ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡುತ್ತಿದ್ದು, ಸ್ಥಳ ಪರಿಶೀಲಿಸಲಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಭೂತಾನ್‌ನಲ್ಲಿ ನಿರಂತರ ಮಳೆಯಿಂದಾಗಿ ಉತ್ತರ ಬಂಗಾಳಕ್ಕೆ ನೀರು ಉಕ್ಕಿ ಹರಿಯುತ್ತಿದೆ. ಈ ವಿಪತ್ತು ದುರದೃಷ್ಟಕರ. ನೈಸರ್ಗಿಕ ವಿಕೋಪಗಳು ನಮ್ಮ ನಿಯಂತ್ರಣಕ್ಕೆ ಮೀರಿವೆ. ನಾನು ನಾಳೆ ಬೆಳಿಗ್ಗೆ 6 ಗಂಟೆಯಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net