ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭರ್ಜರಿ ಮಳೆ ಸಾಧ್ಯತೆ! Bengaluru Weather

city rain
Published on

ಬೆಂಗಳೂರು:  ( Bengaluru Weather ) 2 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ತಿಂಗಳು ಫೆಬ್ರವರಿ 1 ಮತ್ತು 2ನೇ ತಾರೀಕು ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದ್ದು, ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Fengal Rains

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ, ಚಳಿ ಇರಲಿದೆ.

Cyclone Fengal effect rain
ಫೆಂಗಲ್ ಚಂಡಮಾರುತದ ಪರಿಣಾಮ ಶಿವಮೊಗ್ಗ ಹೊಳೆ ಬಸ್ ನಿಲ್ದಾಣದ ಬಳಿ ಮಳೆ ಸುರಿಯಿತು.

ಫೆಬ್ರವರಿ 1ರಂದು ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ.ಫೆಬ್ರವರಿ 2ಕ್ಕೆ ರಾಜ್ಯದ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net