ರಾಜ್ಯದಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ! 9 ಜಿಲ್ಲೆಗಳಿಗೆ ರೆಡ್ ಅಲರ್ಟ್​..Karnataka Rains

city rain
Published on

Karnataka Rains: ರಾಜ್ಯದ ಬಹುತೇಕ ಕಡೆ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ  ಮುನ್ಸೂಚನೆ ಇದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net