ಅಮರನಾಥ ಯಾತ್ರೆಗೆ ಭಾರಿ ಭದ್ರತೆ

7-68389fe0dc117
Published on

ನವದೆಹಲಿ: ಜುಲೈ ತಿಂಗಳಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಗಾಗಿ 42,000 ಕೇಂದ್ರ ಸಶಸ್ತ್ರ ಪೋಲೀಸ್ ಪಡೆಯ ಸಿಬ್ಬಂದಿ ಗಳನ್ನೊಳಗೊಂಡ 580 ತುಕಡಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

48 ಕಿ.ಮೀ ದೂರ ಕ್ರಮಿಸಬೇಕಾದ ಈ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಭದ್ರತಾ ದೖಷ್ಠಿಯಿಂದ 580 ತುಕಡಿಗಳನ್ನು ನಿಯೋಜಿಸಲು ಆದೇಶಿಸಿದ್ದು, 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸ್ಥಳಾಂತರಗೊಂಡ ಸುಮಾರು 80 ತುಕಡಿಗಳು ಸೇರಿದಂತೆ ಉಳಿದವುಗಳನ್ನು ಯಾತ್ರಾ ಮಾರ್ಗ, ಮತ್ತು ಶ್ರೀನಗರ ಸೇರಿದಂತೆ ಮತ್ತಿತರ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೇಂದ್ರ ಗೖಹ ಸಚಿವಾಲಯದಿಂದ ಈ ಅದೇಶ ನೀಡಲಾಗಿದ್ದು, ಜೂನ್ ಎರಡನೇ ವಾರದೊಳಗೆ ಪಡೆಗಳು ನಿಗದಿತ ಸ್ಥಳಗಳಲ್ಲಿ ನಿಯೋಜನೆಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಅಮರನಾಥ ಯಾತ್ರೆ ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net