

ಕೇದಾರನಾಥ: ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಹೆಲಿಕಾಫ್ಟರ್ ಇಂದು (ಅ.18) ಬೆಳಗ್ಗೆ ಪತನಗೊಂಡಿದೆ. ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿಗಳ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.
ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ನಲ್ಲಿ ಒಟ್ಟು 8 ಜನರು ಪ್ರಯಾಣ ಮಾಡುತ್ತಿದ್ದರು. 6 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. (ಏಜೆನ್ಸೀಸ್)