

ಕೊಪ್ಪ: ಇತ್ತೀಚಿನ ದಿನಗಳಲ್ಲಿ ಆಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿರುವುದನ್ನು ಮನಗಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಹಿಳೆಯರ ಕೈಬಲ ಪಡಿಸಲು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಶಾಸಕ ಟಿ.ಡಿ ರಾಜೇಗೌಡ ತಿಳಿಸಿದರು.
ಪುರಭವನದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ದೇಶದಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು 100ದಿನದಲ್ಲಿ ಈಡೇರಿಸಿದ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ ಮಾತ್ರ ಎಂದರು.
ಗೃಹಲಕ್ಷ್ಮೀ ಯೋಜನೆಗೆ ಕೊಪ್ಪ ತಾಲೂಕಿನಲ್ಲಿ 18,319 ಆರ್ಹರಿದ್ದು, ಅದರಲ್ಲಿ 16,685 ನೋಂದಣಿಯಾಗಿದೆ. ತಿಂಗಳಿಗೆ ಸರ್ಕಾರ ನಮ್ಮ ತಾಲೂಕಿಗೆ 3.13 ಕೋಟಿ ಹಣ ನೀಡುತ್ತದೆ ಎಂದರು.
ತಹಸೀಲ್ದಾರ್ ಮಂಜುಳಾ, ಪಪಂ ಮುಖ್ಯಾಧಿಕಾರಿ ಮಂಜುನಾಥ್ ಕೆ.ಸಿ, ಸಿಡಿಪಿಒ ವೀಣಾ, ಇ.ಒ ಪುಟ್ಟೇಗೌಡ, ತಾಲೂಕು ವೈದ್ಯಾಧಿಕಾರಿ ಮಹೇಂದ್ರ ಕಿರೀಠಿ ಇದ್ದರು.