ಶಬರಿಮಲೆಗೆ ತೆರಳುವ ಕರ್ನಾಟಕದ ಭಕ್ತರಿಗಾಗಿ ಕೇರಳದಲ್ಲಿ ಸಹಾಯವಾಣಿ

Ayyappa
Published on

ಬೆಂಗಳೂರು: ಕೇರಳ ರಾಜ್ಯದ ಶಬರಿಮಲೈನಲ್ಲಿ ಜರುಗುವ 2020-21ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳಿಗೆ, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕರ್ನಾಟಕದಿಂದ ತೆರಳುವ ಭಕ್ತಾದಿಗಳಿಗೆ ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಯಾತ್ರಾರ್ಥಿಗಳು ಅಗತ್ಯ ಮಾಹಿತಿಗೆ ಹಾಗೂ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 080-26409689 ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net