ಹೇಮಾ ಬಣಕಾರ್ ಶಿಕಾರಿಪುರ ಮಕ್ಕಳ ಸಾಹಿತ್ಯ ಜಾತ್ರೆ ಸರ್ವಾಧ್ಯಕ್ಷೆ

kasapa samelana
ಶಿಕಾರಿಪುರ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹೇಮಾ ಬಣಕಾರ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು. ಕೆ.ಎಸ್.ಹುಚ್ಚರಾಯಪ್ಪ, ಬಿ.ಪಾಪಯ್ಯ, ಎಚ್.ಎಸ್ .ರಘು, ಎಂ.ಎಚ್.ಸತ್ಯನಾರಾಯಣ, ಲೋಕೇಶ್ ಇತರರಿದ್ದರು.
Published on

ಶಿಕಾರಿಪುರ: ತಾಲೂಕು ಮಟ್ಟದ 9ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಅಕ್ಷರ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹೇಮಾ ಬಣಕಾರ್ ಆಯ್ಕೆಯಾಗಿದ್ದು, ನಿಕಟಪೂರ್ವ ಸರ್ವಾಧ್ಯಕ್ಷೆ ಎಚ್.ಎಲ್.ಖುಷಿ ಚಾಲನೆ ನೀಡಲಿದ್ದಾರೆ ಎಂದು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್.ಹುಚ್ಚರಾಯಪ್ಪ ತಿಳಿಸಿದರು.
ತಾಲೂಕು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಜಾನಪದ ಪರಿಷತ್, ಕಸಾಪ, ಅಕ್ಷರ ರೆಸಿಡೆನ್ಷಿಯಲ್ ಸ್ಕೂಲ್, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜ.4ರಂದು ಅಕ್ಷರ ಶಾಲೆಯಲ್ಲಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಾ. ಹಾಫೀಜ್ ಕರ್ನಾಟಕಿ, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ತಹಸೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಅಕ್ಷರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಮತಾ ರವಿಕುಮಾರ್, ಬಿಇಒ ಜಿ.ಎಸ್.ಶಶಿಧರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಲ್.ರಾಜು, ಜಾನಪದ ಪರಿಷತ್ ಅಧ್ಯಕ್ಷ ಬಿ.ಪಾಪಯ್ಯ, ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ರಘು, ಬನ್ನೂರು ಮಂಜಪ್ಪ, ವೇದಿಕೆಯ ಗೌರವಾಧ್ಯಕ್ಷ ಪಿ.ರಾಮಯ್ಯ ಇತರರು ಭಾಗವಹಿಸಲಿದ್ದಾರೆ ಎಂದರು.
11 ಗಂಟೆಯಿಂದ ಮಕ್ಕಳಿಂದ ಸ್ವರಚಿತ ಕವನ ವಾಚನ, ಕಥಾ ವಾಚನ, ಚುಟುಕು ವಾಚನ ಗೋಷ್ಠಿಗಳು ಜರುಗಲಿದೆ.
ಸಮಾರೋಪದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಅಕ್ಷರ ರೆಸಿಡೆೆನ್ಷಿಯಲ್ ಸ್ಕೂಲ್ ಪ್ರಾಚಾರ್ಯ ನಾಗರಾಜ್ ಗೋನಾಳ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಕೇಶ್ವರ, ಸುಗಂಧ ಬಳಗದ ಅಧ್ಯಕ್ಷ ಎಂ.ಜಿ.ಪ್ರಕಾಶ್ ಪಾಲ್ಗೊಳ್ಳುವರು ಎಂದು ಹೇಳಿದರು. ಜಾನಪದ ಪರಿಷತ್ ಅಧ್ಯಕ್ಷ ಬಿ.ಪಾಪಯ್ಯ, ಕಸಾಪ ಅಧ್ಯಕ್ಷ ಎಚ್.ಎಸ್.ರಘು, ಸತ್ಯನಾರಾಯಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net