

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಜಿ ಮುಖ್ಯಮಂತ್ರಿ, ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥೆ ಹೇಮಂತ್ ಸೋರೆನ್ ಅವರನ್ನು ವಶಕ್ಕೆ ಪಡೆದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಕಾರಿ ನಿರ್ದೇಶನಾಲಯ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆಯ ಭಾಗವಾಗಿ ಅವರನ್ನು ನವದೆಹಲಿಗೆ ಸ್ಥಳಾಂತರಿಸುವ ಸಾಧ್ಯತೆ ದಟ್ಟವಾಗಿದೆ.
ಬುಧವಾರ ಸಂಜೆ ಸುಮಾರು ಏಳು ಘಂಟೆಗಳ ಕಾಲ ಇಡಿ ವಿಚಾರಣೆ ಎದುರಿಸಿದ ಸೋರೆನ್ ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳ ಬಳಿಕ ಅವರನ್ನು ವಶಕ್ಕೆ ಪಡೆದಿದೆ.