ಜಾರ್ಖಂಡ್: ಗಂಡೇ ವಿಧಾನಸಭಾ ಕ್ಷೇತ್ರದಿಂದ ಹೇಮಂತ್ ಸೋರೆನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ

kalpana
Published on

ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಅವರು ಇಂದು ( ಸೋಮವಾರ ) ಜಾರ್ಖಂಡ್​ ಮುಕ್ತಿ ಮೋರ್ಚಾ ಪಕ್ಷದ (ಜೆಎಂಎಂ) ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್​ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಗಿರಿಡೀಹ್​ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ಅವರ ರಾಜೀನಾಮೆಯಿಂದ ತೆರವಾಗಿದೆ. ಈ ಕ್ಷೇತ್ರಕ್ಕೆ ಲೋಕಸಭೆ ಚುನಾವಣೆ ಜತೆಗೆ ಮೇ 20ರಂದು ಉಪಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಈ ಜಾರ್ಖಂಡ್​ ಮುಖ್ಯಮಂತ್ರಿ ಚಂಪೈ ಸೂರೇನ್​ ಹಾಗೂ ಸೋದರ ಮಾವ ಬಸಂತ್ ಸೊರೆನ್ ಸೇರಿದಂತೆ ಇತರರು ಜೊತೆಗಿದ್ದರು.

48 ವರ್ಷದ ಕಲ್ಪನಾ ಅವರು ಎಂಟೆಕ್ ಮತ್ತು ಎಂಬಿಎ ವಿದ್ಯಾರ್ಹತೆ ಪಡೆದಿದ್ದಾರೆ. ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೇಮಂತ್ ಸೋರೆನ್ ಅವರನ್ನು ಬಂಧಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net