ಶೈಕ್ಷಣಿಕ ಪ್ರವಾಸ ರದ್ದು ಗಾಳಿಸುದ್ದಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ ಇಲ್ಲಿದೆ

Kodachadri School students Paddy Planting
ಸಾಗರ ತಾಲೂಕಿನ ಗಿಣಿವಾರ ಗ್ರಾಮದಲ್ಲಿ ಕೊಡಚಾದ್ರಿ ಆಂಗ್ಲ ಮಾಧ್ಯಮ ವಸತಿ ಶಾಲೆ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು.
Published on

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗಿರುವ ಶೈಕ್ಷಣಿಕ ಪ್ರವಾಸ ಮಾಡದಂತೆ ಹಾಗೂ ಹಮ್ಮಿಕೊಂಡಿದ್ದಲ್ಲಿ ಹಿಂತಿರುಗುವಂತೆ ಯಾವುದೇ ಸೂಚನೆ ಹಾಗೂ ನಿರ್ದೇಶನಗಳನ್ನು ನೀಡಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸ್ಪಷ್ಟನೆ ನೀಡಿದೆ.

ಶೈಕ್ಷಣಿಕ ಪ್ರವಾಸ ರದ್ದು ಮಾಡಿರುವ ಬಗ್ಗೆ ಹಾಗೂ ಈಗಾಗಲೇ ಪ್ರವಾಸ ಹೊರಟಿದ್ದಲ್ಲಿ ಕೂಡಲೇ ಹಿಂದಿರುಗಿ ಬರುವಂತೆ ಶಿಕ್ಷಣ ಇಲಾಖೆಯು ಸೂಚಿಸಿದೆ ಎಂದು ವಾಟ್ಸ್‌ಆೃಪ್‌ನಲ್ಲಿ ವ್ಯಾಪಕ ಪ್ರಚಾರವಾಗಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಲಾಗುತ್ತಿದೆ ಎಂದು ಪ್ರೌಢ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.

ಇನ್ನು ಈ ವರ್ಷ ಕೈಗೊಂಡಿರುವ ಪ್ರವಾಸಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು. ಪ್ರವಾಸ ಕೈಗೊಳ್ಳುವ ಮುನ್ನ ಪೂರ್ವಭಾವಿಯಾಗಿ ಯೋಜನೆ ರೂಪಿಸಬೇಕು. ಪ್ರವಾಸದ ಸಂದರ್ಭದಲ್ಲಿ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು. ಎಲ್ಲ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪ್ರವಾಸದ ಉಸ್ತುವಾರಿ ವಹಿಸಿರುವ ಸಿಬ್ಬಂದಿಯು ವಿದ್ಯಾರ್ಥಿಗಳ ಜತೆ ಎಚ್ಚರಿಕೆಯಿಂದ ಇದ್ದು ಎಚ್ಚರಿಕೆ ವಹಿಸಬೇಕು.

ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಂಟಾಗುವ ಯಾವುದೇ ಹಾನಿಗೆ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿಯೇ ಜವಾಬ್ದಾರರಾಗಿರುತ್ತಾರೆ ಎಂದು ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net