

ರಾಣೆಬೆನ್ನೂರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಲಿಂ. ಹಾನಗಲ್ಲ ಕುಮಾರ ಶಿವಯೋಗಿಗಳ 157ನೇ ಜಯಂತಿ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮ ನ. 10ರಂದು ಬೆಳಗ್ಗೆ 11ಕ್ಕೆ ನಗರದ ಆದಿಶಕ್ತಿ ದೇವಸ್ಥಾನದ ಬಿ.ಕೆ. ಗುಪ್ತಾ ಸಮುದಾಯ ಭವನದಲ್ಲಿ ಜರುಗಲಿದೆ.
ಮಹಾಸಭಾದ ತಾಲೂಕು ಗೌರವ ಅಧ್ಯಕ್ಷರಾದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಲಿಂಗನಾಯಕನಹಳ್ಳಿ ಜಂಗಮ ಕ್ಷೇತ್ರದ ಚನ್ನವಿರ ಸ್ವಾಮೀಜಿ, ಸ್ಥಳಿಯ ದೊಡ್ಡಪೇಟೆ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ತಾಲೂಕು ಅಧ್ಯಕ್ಷ ಕೆ.ಎನ್. ಕೋರಧಾನ್ಯಮಠ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಟಕದ ಅಧ್ಯಕ್ಷ ಎಂ.ಎಸ್. ಕೋರಿಶೆಟ್ಟರ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.