ಹಕ್ಕಿಜ್ವರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲೂ ಕಟ್ಟೆಚ್ಚರ

farm
Published on

ಶಿವಮೊಗ್ಗ: ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗಬಾರದು ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಎ.ಬಾಬುರತ್ನ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರ್ಮ್‌ಗಳಿದ್ದು ಈ ಫಾರ್ಮ್‌ಗಳಲ್ಲಿ ಒಟ್ಟು 17,41,650 ಕೋಳಿಗಳ ಸಾಕಣೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ಕಟ್ಟೆಚ್ಚರವಹಿಸಿ 476 ಕೋಳಿಗಳ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆಯ ವಿವಿಧೆಡೆ 29 ರ‌್ಯಾಪಿಡ್ ರೆಸ್ಪಾನ್ಸ್ ಟೀಮ್‌ಗಳನ್ನು ರಚಿಸಲಾಗಿದೆ. ಎಲ್ಲ ಕೋಳಿ ಫಾರ್ಮ್‌ಗಳ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ, ಕೋಳಿಗಳು ಅಸಹಜವಾಗಿ ಇಲ್ಲವೆ ಸಾಮೂಹಿಕವಾಗಿ ಮೃತಪಟ್ಟರೆ ಕೂಡಲೇ ಕೋಳಿ ಫಾರ್ಮ್ ಮಾಲೀಕರು ಹಾಗೂ ಸಾರ್ವಜನಿಕರು ಹತ್ತಿರದ ಪಶುವೈದ್ಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net