ನಾನೇ CM ಆಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ : ಸಿದ್ದರಾಮಯ್ಯ

Bbau (79)
Published on

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್​​ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು CM ಸಿದ್ದರಾಮಯ್ಯ ತಿಳಿಸಿದರು.

ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು.ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ FIR ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

SIT ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ಐಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ SIT ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ಐಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net