

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ (prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಪ್ರಜ್ವಲ್ಗೆ (Prajwal Revanna) ಇನ್ನಷ್ಟು ದಿನ ಜೈಲಿನಲ್ಲಿ ದಿನ ದೂಡಬೇಕಾಗುತ್ತದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ನನ್ನು (Prajwal Revanna) ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್‌ಐಟಿ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿತ್ತು. ಪ್ರಕರಣ ಸಂಬಂಧ ಪ್ರಜ್ವಲ್ ನಿರೀಕ್ಷಣಾ ಜಾಮೀನು (Bail) ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.
ನವೆಂಬರ್ 11ರಂದು ಸುಪ್ರೀಂಕೋರ್ಟ್ನಲ್ಲೂ ಸಹ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು.