ಬೆಸ್ಕಾಂ ಸ್ಮಾcರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿ ಎರಡು ಅರ್ಜಿ : ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

highcourt
Published on

ಬೆಂಗಳೂರು:  ನೂತನವಾಗಿ ನಿರ್ಮಾಣಗೊಂಡ ನಿವೇಶನವೊಂದಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ಬೆಸ್ಕಾಂ ನೀಡಿದ್ದ ಹಿಂಬರಹ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಸಿದ್ದಲ್ಲದೇ, ಅದೇ ವಿಚಾರವಾಗಿ ಪಿಐಎಲ್ ಸಲ್ಲಿಸಿದ್ದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ಜತೆಗೆ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಒತ್ತಾಯಿಸಿ ಬೆಸ್ಕಾಂ ದೊಡ್ಡಬಳ್ಳಾಪುರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಯಲಕ್ಷ್ಮಿ ಎಂಬವರಿಗೆ ನೀಡಿದ್ದ ಸಂವಹನ ಪತ್ರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಈ ಆದೇಶ ನೀಡಿದೆ.

ಅರ್ಜಿದಾರರು ಇದೇ ವಿಚಾರವನ್ನು ಪ್ರಸ್ತಾಪಿಸಿ ಏಕ ಸದಸ್ಯಪೀಠಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು. ಈಗ ಇದೇ ಅರ್ಜಿಯಲ್ಲಿರುವ ಅಂಶಗಳನ್ನು ಪ್ಯಾರಾ ಸಂಖ್ಯೆಗಳನ್ನು ಬದಲಾಯಿಸಿ ಅಕ್ಷರ ಸಹಿತವಾಗಿ ನಕಲು ಮಾಡಿ ವಿಭಾಗೀಯ ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಒಂದೇ ವಿಚಾರವಾಗಿ ಸಲ್ಲಿಸಿರುವ ಮತ್ತೊಂದು ಅರ್ಜಿ ವಿಭಾಗೀಯ ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ. ಈ ಪ್ರಕ್ರಿಯೆ ನ್ಯಾಯಾಂಗ ಶಿಸ್ತು ಸಂಬಂಧಿಸಿದ್ದಾಗಿದೆ. ಈ ರೀತಿಯಲ್ಲಿ ಅರ್ಜಿ ಸಲ್ಲಿಕೆ ಮಾಡುವುದು ಒಪ್ಪುವಂತದಲ್ಲ.

ಅಲ್ಲದೆ, ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸಂಬಂಧಿಸಿದಂತೆ ಒತ್ತಾಯ ಮಾಡುವುದಿಲ್ಲ ಎಂಬುದಾಗಿ ಎಜಿ ಈ ಹಿಂದೆ ನ್ಯಾಯಪೀಠಕ್ಕೆ ಭರವಸೆ ನೀಡಿದ್ದಾರೆ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸುತ್ತಿರುವುದಾಗಿ ಪೀಠ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net