ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್ ಅಸ್ತು

datta peetha
Published on

ಚಿಕ್ಕಮಗಳೂರು: ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು, ಮುಸ್ಲಿಮರಿಬ್ಬರಿಗೂ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ ‘ಸೌಹಾರ್ದಯುತ ಪರಿಹಾರ’ ಮಾರ್ಗವನ್ನು ರಾಜ್ಯ ಸರ್ಕಾರ ಕಂಡುಕೊಂಡಿತ್ತು. ಇದೀಗ ಬಾಬಾಬುಡನ್​ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್​ ಅನುಮತಿ ನೀಡಿದೆ.

ಈ ಹಿಂದೆ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ' ಎಂದು ಹೇಳಿದ್ದನ್ನು ಈ ಸಂದರ್ಭದಲ್ಲಿ ನೆನೆಯಬಹುದು.

ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ಭಕ್ತರು ಖುಷಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net