ಬಿಎನ್‌ಎಸ್ ಸೆಕ್ಷನ್‌ಗಳಡಿ ಅಪರಾಧ ಪ್ರಕರಣ ದಾಖಲಿಸಿ ಹೈಕೋರ್ಟ್ ಸೂಚನೆ

Published on

ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಾಗಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಸಲು ಎಲ್ಲ ಪೊಲೀಸ್ ಠಾಣೆಗಳಿಗೆ ಜಾಗೃತಿ ಮೂಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಐಪಿಸಿ ರದ್ದಾದ ನಂತರವೂ ಅದೇ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಗೀತಾ ಅರಸ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣ ಸಂಬಂಧ ಬಿಎನ್‌ಎಸ್ ಅಡಿಯಲ್ಲಿ ದೂರು ದಾಖಲಿಸಬೇಕಾದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಮುಂದಿನ ವಿಚಾರಣೆವರೆಗೂ ತಡೆ ನೀಡಲಾಗುತ್ತಿದೆ.ಜತೆಗೆ, ಪ್ರಕರಣದಲ್ಲಿನ ಆರೋಪಗಳಿಗೆ ಸಂಬಂಧಿಸಿದಂತೆ ಬಿಎನ್‌ಎಸ್‌ಅಡಿಯಲ್ಲಿ ಸೆಕ್ಷನ್‌ಗಳ ಸಂಖ್ಯೆ ಬದಲಾಗಿದ್ದು, ಅದರಂತೆ ದಾಖಲಿಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಪ್ರಕರಣದ ಹಿನ್ನೆಲೆ:

ಅರ್ಜಿದಾರರಾರು ತನ್ನ ಜಮೀನಿನನ್ನು ರೂಪಾಂತರ ಮಾಡಿಕೊಡಲು ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತ್ತು. ಬಳಿಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ತಮ್ಮ ಜಮೀನು ವಿವಾದ ಎದುರಾಗಿತ್ತು. ಈ ಬಗ್ಗೆ ಐಪಿಸಿ ಅಡಿಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎ್ಐಆರ್ ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net