ಎಚ್‌ಡಿಡಿ, ಎಚ್‌ಡಿಕೆಗೆ ಹೈಕೋರ್ಟ್ ನೋಟಿಸ್

highcourt
Published on

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟಿಸಿರುವ ಪ್ರಕರಣ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಛಾಟನೆ ಮತ್ತು ಆ ಹುದ್ದೆಗೆ ತಾತ್ಕಾಲಿಕವಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಿ.ಎಂ.ಇಬ್ರಾಹಿಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ, ಇಬ್ಬರಿಗೂ ನೋಟಿಸ್ ಜಾರಿ ಮಾಡಿ ಜೂ.4ಕ್ಕೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net