

ಬೆಂಗಳೂರು: ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನುಬಾಹಿರವಾಗಿ 30 ಸಾವಿರ ವಿದ್ಯಾರ್ಥಿಗಳಿಂದ 21 ಕೋಟಿ ರೂ. ಹೆಚ್ಚುವರಿ ಶುಲ್ಕ ಸಂಗ್ರಹಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕರ್ನಾಟಕ ಕಾನೂನು ವಿವಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಾಗಿ ನಗರದ ಗೋರ್‌ಗುಂಟೆ ಪಾಳ್ಯದ ನಿವಾಸಿ ಎನ್. ಪ್ರಿಯಾಂಕ್ ಎಂಬುವವರು ಸಲ್ಲಿಸಿರುವ ಅರ್ಜಿಯನ್ನು ಆರ್. ದೇವ್‌ದಾಸ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಕರ್ನಾಟಕ ಕಾನೂನು ವಿವಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.