ತೀರ್ಮಾನಕ್ಕೂ ಮುನ್ನ ಅನುಮತಿ ಕಡ್ಡಾಯ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶ

highcourt
Published on

 ಬೆಂಗಳೂರು: ಜಗತ್ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದ ನಿರ್ವಹಣೆಗಾಗಿ ರೂಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

2024 ರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ’ಯನ್ನು ಅಸಾಂವಿಧಾನಿಕ ಎಂದು ಘೋಷಿಸಲು ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಧಾನಸಭೆ ನಿಯಮಗಳಿಗೆ ವಿರುದ್ಧವಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ ಜಾರಿಗೊಳಿಸಲಾಗಿದೆಯೇ ಎಂಬುದನ್ನು ಪರಿಗಣಿಸಬೇಕಿದೆ.

ಹೀಗಾಗಿ ಅರ್ಜಿ ಇತ್ಯರ್ಥವಾಗುವವರೆಗೆ ಚಾಮುಂಡೇಶ್ವರಿ ದೇವಾಲಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಪ್ರಾಧಿಕಾರವು ವಿಲೇವಾರಿ ಮಾಡುವಂತಿಲ್ಲ. ಹಾಲಿ ದೇವಾಲಯದಲ್ಲಿ ಜಾರಿಯಲ್ಲಿರುವ ಸಂಪ್ರದಾಯದಲ್ಲಿ ಯಾವುದೇ ತರನಾದ ಬದಲಾವಣೆಯಾಗಲಿ ಅಥವಾ ಹಸ್ತಕ್ಷೇಪ ಮಾಡಬಾರದು ಎಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net