ಆರೋಪಿಗಳ ಗುರುತು ಪತ್ತೆಗೆ ಆಧಾರ್: ದತ್ತಾಂಶ ಪರಿಶೀಲನೆಗೆ ಹೈಕೋರ್ಟ್ ಅನುಮತಿ

highcourt
Published on

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯಡಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಸಂಬಂಧ ತನಿಖೆ ನಡೆಸಲು ಆರೋಪಿಗಳ ಗುರುತು ಪತ್ತೆ ಅಥವಾ ದೃಢೀಕರಣಕ್ಕಾಗಿ ಆಧಾರ್ ದತ್ತಾಂಶ ಪರಿಶೀಲನೆ ನಡೆಸುವುದಕ್ಕಾಗಿ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಅವಕಾಶ ಕಲ್ಪಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರಕ್ಕೆ (ಯುಐಡಿಎಐ) ಹೈಕೋರ್ಟ್ ಹೇಳಿದೆ.

ಪಿಎಂಎಲ್‌ಎ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ ಅಕ್ರಮ ಹಣ ವರ್ಗಾವಣೆ ಅಪರಾಧದ ಕುರಿತು ತನಿಖೆ ನಡೆಸುವುದು ಸರ್ಕಾರದ ಜವಬ್ದಾರಿ.

ಪಿಎಂಎಲ್‌ಎ ಅಡಿಯಲ್ಲಿನ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಜಾರಿ ನಿರ್ದೇಶನಾಲಯಕ್ಕೆ ಅಧಿಕಾರ ನೀಡಲಾಗಿದ್ದು, ಈ ರೀತಿಯ ಅಪರಾಧ ಪ್ರಕರಣಗಳಲ್ಲಿ ಮನವಿ ಮಾಡಿದವರ ನಿಜವಾದ ಗುರುತು ಪತ್ತೆಗೆ ಅನುಮತಿ ನೀಡಬಹುದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ ಅಲ್ಲದೆ, 21 ಮಂದಿ ಅಕ್ರಮ ಹಣ ವರ್ಗವಣೆ ಆರೋಪ ಹೊತ್ತಿರುವ ಆರೋಪಿಗಳ ಮಾಹಿತಿಗೆ ಸಂಬಂಧಿಸಿದಂತೆ ಪರಿಶೀಲನೆಗೆ ಅವಕಾಶ ಕಲ್ಪಿಸಲು ಯುಐಡಿಎಐಗೆ ನಿರ್ದೇಶನ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net