ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವಕೇಟ್ ಜನರಲ್, ಗಡಿಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ಬಲವಾಗಿ ಆಕ್ಷೇಪಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಮೆರಿಟ್ ಬಗ್ಗೆ ಉಲ್ಲೇಖಿಸುವುದಿಲ್ಲ. ಆದರೆ, ಮೇಲ್ಮನವಿ ಸಲ್ಲಿಸಿರುವುದು ತಾಂತ್ರಿಕವಾಗಿ ತಪ್ಪಾಗಿದೆ. ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ. ಆ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿತು. ಅಲ್ಲದೇ ಅರ್ಜಿ ಸಂಬಂಧ ಸರ್ಕಾರ, ಪುತ್ತೂರು ವಿಭಾಗಾಧಿಕಾರಿ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 1 ಕ್ಕೆ ಮುಂದೂಡಿದೆ.