ಇಂಜಿನಿಯರ್‌ಗಳ ನೇಮಕಾತಿಯಲ್ಲಿ ಅಕ್ರಮ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

highcourt
Published on

ಬೆಂಗಳೂರು:  ಗ್ರಾಮೀಣಾಭಿವೃದ್ಧಿ ಇಲಾಖೆಯ ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಕಾರ್ಯಕಾರಿ ಎಂಜಿನಿಯರ್‌ಗಳ ನೇಮಕದಲ್ಲಿ ನಡೆದಿರುವ ಅಕ್ರಮದ ಕುರಿತಂತೆ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಎಇಇ ನೇಮಕದಲ್ಲಿ ನಡೆದಿರುವ ಅಕ್ರಮ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ ಮಾಡಿರುವ ಶಿಾರಸ್ಸಿಗೆ ತಡೆ ನೀಡಲು ನಿರಾಕರಿಸಿರುವ ಕೆಎಟಿ ಆದೇಶ ಪ್ರಶ್ನಿಸಿ ಎಂಜಿನಿಯರ್ ವಿಶ್ವಾಸ್ ಮತ್ತಿತರರು ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಕೃಷ್ಣ. ದೀಕ್ಷಿತ್ ಮತ್ತು ರಾಮಚಂದ್ರ ಹುದ್ದಾರ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀರು ವಾದ ಮಂಡಿಸಿ ಆಯ್ಕೆ ಮತ್ತು ನೇಮಕಾತಿ ಕಾನೂನಾತ್ಮಕ ವಿಚಾರದ ಹೊರತಾಗಿ ಅರ್ಜಿದಾರರನ್ನು ನೇಮಕ ಮಾಡಿದ ಮೇಲೆ ಅವರು ಉದ್ಯೋಗದಲ್ಲಿದ್ದಾರೆ. ಅದು ತರಬೇತಿ ಹಂತ ಯಾವುದೇ ಆಗಿರಬಹುದು. ಆ ನಿರ್ದಿಷ್ಟ ಹುದ್ದೆಗೆ ನಿಗದಿಪಡಿಸಿರುವ ವೇತನವನ್ನು ನಿರಂತರವಾಗಿ ಸಂವಿಧಾನದ 23ನೇ ವಿಧಿಯ ಪ್ರಕಾರ ಪಾವತಿಸಬೇಕು. ಗುಜರಾತ್ ಸರ್ಕಾರ ವರ್ಸಸ್ ಗುಜರಾತ್ ಹೈಕೋರ್ಟ್ ಪ್ರಕರಣದಲ್ಲಿ ಈ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿದೆ ಎಂದು ವಾದಿಸಿದ್ದರು. ಅಲ್ಲದೇ, ತನಿಖೆಯ ಹೊಣೆಯನ್ನು ಸಿಬಿಐಗೆ ನೀಡಬೇಕೆ ವಿನಃ ರಾಜ್ಯ ಸರ್ಕಾರದ ಯಾವುದೇ ಸಂಸ್ಥೆಗೆ ನೀಡಬಾರದು. ಇಂತಹ ವಿಚಾರಗಳಲ್ಲಿ ಪರಿಣಿತಿ ಇರುವವರನ್ನು ತನಿಖಾ ಸಂಸ್ಥೆ ಒಳಗೊಳ್ಳಬೇಕು ಎಂದು ಪ್ರತಿಪಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net