ರೌಡಿಶೀಟರ್ ಮೊಟ್ಟೆ ರಾಜ್ ಬಂಧನ ಸರಿ ಇದೆ : ರಾಜ್ಯ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

highcourt
Published on

ಬೆಂಗಳೂರು: ರೌಡಿಶೀಟರ್ ರಾಜೇಶ್ ಅಲಿಯಾಸ್ ಮೊಟ್ಟೆ ರಾಜ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ರಾಜೇಶ್ ಬಂಧನ ಪ್ರಶ್ನಿಸಿ ಆತನ ಪತ್ನಿ ಪ್ರಿಯದರ್ಶಿನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಕೆ.ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ಸರ್ಕಾರಿ ಪರ ವಕೀಲರು ವಾದ ಮಂಡಿಸಿ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪೊಲೀಸ್ ಇಲಾಖೆ ಸಾಕಷ್ಟು ಭಾರಿ ಅರ್ಜಿದಾರರ ಪತಿಗೆ ಎಚ್ಚರಿಸಿದ್ದರೂ ಕೃತ್ಯದಲ್ಲಿ ತೊಡಗಿಸಿಕೊಳ್ಳುವುದನ್ನು ಬಿಡಲಿಲ್ಲ. ಇದರಿಂದ ಅನ್ಯ ಮಾರ್ಗವಿಲ್ಲದ ಗೂಂಡಾ ಕಾಯ್ದೆಯಡಿ ರಾಜೇಶ್ ಅನ್ನು ಬಂಧಿಸಲಾಗಿದೆ.

ಸಾರ್ವಜನಿಕ ವ್ಯವಸ್ಥೆಗೆ ಅಪಾಯ ಉಂಟುಮಾಡುವಂತಹ ರಾಜೇಶ್‌ನ ಎ್ಲ ಅಪರಾಧ ಚಟುವಟಿಕೆಗಳನ್ನು ಪರಿಗಣಿಸಿದ ನಂತರವೇ ಪೊಲೀಸ್ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಆತನ ವಿರುದ್ಧ 12 ಅಪರಾಧ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಮೂರು ಕೊಲೆ ಯತ್ನ, ಹಲ್ಲೆ ಪ್ರಕರಣಗಳಿವೆ. ಮಾರಕಾಸ್ತ್ರಗಳೊಂದಿಗೆ ಸುತ್ತಾಡುತ್ತಿದ್ದ ಆತನ ನಡೆಯಿಂದ ಜನರಲ್ಲಿ ಭಯ ಉಂಟಾಗಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೊನೆಯದಾಗಿ ಮೊಟ್ಟೆ ರಾಜೇಶ್ ವಿರುದ್ಧ 2024ರ ಆ.18ರಂದು ಅಪರಾಧ ಪ್ರಕರಣ ದಾಖಲಾಗಿದೆ. ಅದಾದ 164 ನಂತರ ಗುಂಡಾ ಕಾಯ್ದೆಯಡಿ ಬಂಧನ ಆದೇಶ ಮಾಡಲಾಗಿದೆ. ಈ 164 ದಿನಗಳಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿರುವುದನ್ನು ಸಮರ್ಥಿಸುವ ಯಾವೊಂದು ದಾಖಲೆ ಇಲ್ಲ. ಆದ್ದರಿಂದ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದರು.

ಸರ್ಕಾರಿ ಅಭಿಯೋಜಕರ ವಾದ ಪರಿಗಣಿಸಿದ ನ್ಯಾಯಪೀಠ, ಮೊಟ್ಟೆ ರಾಜೇಶ್ ಅನ್ನು ಗುಂಡಾ ಕಾಯ್ದೆಯಡಿ ಬಂಧಿಸಿರುವ ಕ್ರಮ ಸೂಕ್ತವಾಗಿದೆ ಎಂದು ಪೀಠ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net