29ರಿಂದ ಮೇ 25ರವರೆಗೆ ಹೈಕೋರ್ಟ್‌ಗೆ ರಜೆ

highcourt
Published on


ಬೆಂಗಳೂರು: ಹೈಕೋರ್ಟ್‌ಗೆ ಏ.29ರಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ.


ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಯಲಿದೆ. ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ.

ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net