ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಸೆ. 11ರಿಂದ

Published on

ರಾಣೆಬೆನ್ನೂರ: ಜಿಪಂ, ಸ್ಥಳೀಯ ಶಾಲಾ ಶಿಕ್ಷಣ ಇಲಾಖೆ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸೆ. 11ರಂದು ಬೆಳಗ್ಗೆ 10ಕ್ಕೆ ನಗರದ ಹಳೆ ಪಿ.ಬಿ. ರಸ್ತೆ ಆರ್‌ಟಿಇಎಸ್ ಕಾಲೇಜ್ ಮೈದಾನದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಆಯೋಜಿಸಲಾಗಿದೆ.
ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸುವರು. ತಹಸೀಲ್ದಾರ್ ಎಚ್.ಎನ್. ಶಿರಹಟ್ಟಿ, ತಾಪಂ ಇಒ ಸುಮಲತಾ ಎಸ್.ಪಿ., ಡಿವೈಎಸ್‌ಪಿ ಡಾ. ಗಿರೀಶ ಬೋಜಣ್ಣನವರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ನಗರಸಭೆ ಆಯುಕ್ತ ನಿಂಗಪ್ಪ ಕುಮ್ಮಣ್ಣನವರ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net