ಆಟೋಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; 7 ಮಂದಿ ಸಾವು, ಹಲವರು ಗಂಭೀರ

Accident
Published on

ಪಟ್ನಾ: ವೇಗವಾಗಿ ಬಂದ ಲಾರಿಯೊಂದು (Truck) ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ. ಮಸೌಧಿ-ನೌಬತ್‌ಪುರ ರಸ್ತೆಯ ನೂರ್ ಬಜಾರ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಮೃತರನ್ನು ಮತೇಂದ್ರ ಬಿಂದ್ (25), ವಿನಯ್ ಬಿಂದ್ (30), ಉಮೇಶ್ ಬಿಂದ್ (38), ರಮೇಶ್ ಬಿಂದ್ (52), ಉಮೇಶ್ ಬಿಂದ್ (30), ಸೂರಜ್ ಠಾಕೂರ್ (20) ಮತ್ತು ಆಟೋ ಚಾಲಕ ಸುಶೀಲ್ ಕುಮಾರ್ (35) ಎಂದು ಗುರುತಿಸಲಾಗಿದೆ.

ಅಪಘಾತದ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಭಾನುವಾರ (ಫೆಬ್ರವರಿ 23) ರಾತ್ರಿ 9:30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಮೇಲೆ ಲಾರಿ ಪಲ್ಟಿಯಾಗಿದ್ದು, ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸಿದಾಗ ಆಟೋದಲ್ಲಿ 12ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net